May 6, 2026

ಸುರತ್ಕಲ್: ಟೋಲ್ ಗೇಟ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು

0
image_editor_output_image-2057075193-1720258468195.jpg

ಮಂಗಳೂರು : ಸಮನ್ಸ್ ಜಾರಿಯಾದ ಕಾರಣ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ವಿರುದ್ದ ಸತತ ಏಳು ವರ್ಷ ಹೋರಾಟ ನಡೆಸಿ ತೆರವುಗೊಳಿಸುವುದರಲ್ಲಿ ಯಶಸ್ವಿಯಾಗಿದ್ದ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಇದರ 101 ಸದಸ್ಯರ ಮೇಲೆ ಅಂದಿನ ಬಿಜೆಪಿ ಸರಕಾರ ಮೊಕದ್ದಮೆ ಹೂಡಿತ್ತು. ಈಗ ನ್ಯಾಯಾಲಯದಿಂದ ಸಮನ್ಸ್ ಜಾರಿಯಾದ ಹಿನ್ನಲೆಯಲ್ಲಿ ಇಂದು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು.

Leave a Reply

Your email address will not be published. Required fields are marked *

error: Content is protected !!