February 3, 2026

ಜಾರ್ಕಂಡ್: ಆಸ್ಪತ್ರೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ

0
Rape_minor_1200x768_0_1200x768.jpeg

ಮೇದಿನಗರ: ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಸಹೋದರಿಯನ್ನು ಭೇಟಿಯಾಗಲು ತೆರಳುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್‌ನ ಪಲಾಮು ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ 12 ವರ್ಷದ ಬಾಲಕಿಯನ್ನು ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಾರ್ಖಂಡ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ವಿಜಯ್ ಶಂಕರ್ ಅವರು, ಬಾಲಕಿಗೆ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಗರ್ವಾ ಜಿಲ್ಲೆಯ ನಿವಾಸಿಯಾದ ಬಾಲಕಿ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ತನ್ನ ಅತ್ತಿಗೆಯ ಸೆಮ್ರಾ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಳು. ಅಲ್ಲಿ ಆಕೆಯ ಸಹೋದರಿ ಚಿಕಿತ್ಸೆ ಪಡೆಯುತ್ತಿದ್ದರು. ಸೆಮ್ರಾ ಮೂಲದ ಇಬ್ಬರು ಆರೋಪಿಗಳು ತಮ್ಮ ಜೀಪಿನಲ್ಲಿ ಹುಡುಗಿಯನ್ನು ಕೂರಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ಬಿಟ್ಟು ಪರಾರಿಯಾಗಿದ್ದಾರೆ, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!