May 5, 2026

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ತೀರ್ಥಹಳ್ಳಿಯಲ್ಲಿ ಪತ್ತೆ

0
image_editor_output_image1136467067-1720387040854.jpg

ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.

ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ (24) ಅವರ ಮೃತದೇಹ ಪತ್ತೆಯಾಗಿದೆ.

ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದಳು.

ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ.ನಾಲೂರು ಸಮೀಪದ ಮಣಿ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿ, ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!