May 6, 2026

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು: ಡೆಂಗ್ಯೂಗೆ 5 ವರ್ಷದ ಬಾಲಕ‌ ಬಲಿ

0
IMG-20240707-WA0088.jpg

ಗದಗ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಡೇಂಜರ್ ಡೆಂಗಿಗೆ ಮೊದಲ ಬಲಿಯಾಗಿದೆ.

ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 5 ವರ್ಷದ ಬಾಲಕ ಸಾವಿಗೀಡಾಗಿದ್ದಾನೆ. ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯು ಹೊಸಮನಿ (5) ಮೃತ ಬಾಲಕ.

ಕಳೆದ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿರಾಯುನನ್ನು ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ನಂತರ ಕೆಲ ಗಂಟೆಗಳ ಕಾಲ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿತ್ತು. ತದನಂತರ ಮೃತ ಬಾಲಕನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

Leave a Reply

Your email address will not be published. Required fields are marked *

error: Content is protected !!