May 6, 2026

ಫರಂಗಿಪೇಟೆ: KSRTC ಬಸ್ ಢಿಕ್ಕಿ: ದ್ವಿಚಕ್ರ ವಾಹನ‌ ಸವಾರ, ಬೆಂಜನಪದವಿನ ಯುವಕ ಮೃತ್ಯು

0
image_editor_output_image1472577263-1720387693582.jpg

ಬಂಟ್ವಾಳ: ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ‌ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನ‌ಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!