ಕಡಬ: ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ನದಿಯ ಪೊದೆಯಲ್ಲಿ ಸಿಕ್ಕಿಹಾಕಿಕೊಂಡ ಯುವಕ
ಕಡಬ: ಸೇತುವೆಯಿಂದ ನದಿಗೆ ಹಾರಿದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುಳಿಕುಕ್ಕು ಸೇತುವೆಯಲ್ಲಿ ಸೋಮವಾರದಂದು ನಡೆದಿದೆ.
ಪುಳಿಕುಕ್ಕು ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ಇರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಯುವಕನನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






