ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿದ್ದು, ಭಾರತ ತಂಡದ ಮುಖ್ಯ ತರಬೇತುದಾರರಾಗಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್ ಆಗಿ ಘೋಷಿಸಿದ್ದಾರೆ.
ಭಾರತದ ಮಾಜಿ ಆರಂಭಿಕ ಆಟಗಾರರಾದ ಗಂಭೀರ್ ಮತ್ತು ಡಬ್ಲ್ಯುವಿ ರಾಮನ್ ಅವರನ್ನು ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ ಕಳೆದ ತಿಂಗಳು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಹುದ್ದೆಗೆ ಸಂದರ್ಶನ ನಡೆಸಿತ್ತು.





