ಸೇನಾ ಹೆಲಿಕಾಪ್ಟರ್ ಪತನ:
ಹುತಾತ್ಮ ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜ ಅವರ ಪಾರ್ಥಿವ ಶರೀರ ಹುಟ್ಟೂರು ಚಿತ್ತೂರಿಗೆ
ಆಂಧ್ರ ಪ್ರದೇಶ: ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜ ಅವರ ಪಾರ್ಥಿವ ಶರೀರವನ್ನು ಇಂದು ಅವರ ಹುಟ್ಟೂರಾದ ಚಿತ್ತೂರಿಗೆ ತರಲಾಯಿತು.
ನಿನ್ನೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.
ಡಿಸೆಂಬರ್ 8 ರಂದು ತಮಿಳುನಾಡಿನ ಕುನೂರ್ ಬಳಿ ಐಎಎಫ್ ಹೆಲಿಕಾಪ್ಟರ್ ಪತನಗೊಂಡು 13 ಜನರು ಹುತಾತ್ಮರಾಗಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡರ್, ಸಿಬ್ಬಂದಿ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ವಾಯುಪಡೆಯ ಹೆಲಿಕಾಪ್ಟರ್ ಸಿಬ್ಬಂದಿ ಸೇರಿದಂತೆ ಒಂಬತ್ತು ಇತರ ಸಶಸ್ತ್ರ ಪಡೆಗಳ ಸಿಬ್ಬಂದಿ ಸೇರಿದ್ದಾರೆ.
ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದು, ಪ್ರಸ್ತುತ ಬೆಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.





