BJP ಕಾರ್ಯಕ್ರಮದಲ್ಲಿ ಮದ್ಯ ವಿತರಣೆ: ನೆಲಮಂಗಲದ ಬಿಜೆಪಿ ಅಧ್ಯಕ್ಷ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ
ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ವಿತರಿಸಿದ ಆರೋಪದ ಮೇಲೆ ನೆಲಮಂಗಲದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಕ್ಕಾಗಿ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಜಗದೀಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಿದರು.




