ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಶಾಸಕ ಭರತ್ ಶೆಟ್ಟಿ ಭಯೋತ್ಪಾದಕನೇ?: ಮಂಜುನಾಥ್ ಭಂಡಾರಿ ವಾಗ್ದಾಳಿ
ಮಂಗಳೂರು: ಸಮಯ ಬಂದಾಗ ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ, ಹಾಗಾದರೆ ಆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂದು ಪೊಲೀಸರು ತಪಾಸಣೆ ಮಾಡಬೇಕು, ಭರತ್ ಶೆಟ್ಟಿ ಸಂಸತ್‌ಗೆ ಯಾವ ರೀತಿ ನುಗ್ಗುತ್ತಾರೆ, ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರಿರಿಸ್ಟಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪ್ರಶ್ನಿಸಿದ್ದಾರೆ.
ಸಮಯ ಬಂದಾಗ ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ, ಹಾಗಾದರೆ ಆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂದು ಪೊಲೀಸರು ತಪಾಸಣೆ ಮಾಡಬೇಕು, ಅನುಮತಿ ಇಲ್ಲದೇ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು ಅಪರಾಧ, ಹಾಗಾಗಿ ಪೊಲೀಸರು ಭರತ್ ಶೆಟ್ಟಿಯವರ ಹೇಳಿಕೆ ಬಗ್ಗೆ ಅವರನ್ನು ವಿಚಾರಣೆ ಮಾಡಬೇಕು ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.
ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದರು.
ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನ ಬಳಿಗೆ ಹೋಗಲು ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆ ಇರಲಿ, ಭರತ್ ಶೆಟ್ಟಿ ಇದೇ ರೀತಿ ಮಾತನಾಡುತ್ತಾ ಹೋದರೆ ಪೊಲೀಸರು ಭರತ್ ಶೆಟ್ಟಿ ಬಳಿಗೆ ಹೋಗಿ ಸರಿಯಾದ ಉಪಚಾರ ಮಾಡುತ್ತಾರೆ ಎಂದರು.




