March 17, 2026

ಉಳ್ಳಾಲ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ಪೆಕ್ಟರ್

0
first-information-report

ಉಳ್ಳಾಲ: ಡ್ಯೂಟಿ ಹಾಕಲು ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ಕೆಎಸ್‌ಆರ್‌ಪಿ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ.

ಲಂಚ ಸ್ವೀಕರಿಸುತ್ತಿದ್ದ ಕೆ ಎಸ್ ಆರ್ ಪಿ ಇನ್ಸ್ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಲುಕಿದ್ದಾರೆ.

ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಟ್ರ‍್ಯಾಪ್ ಆಗಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್ ಕೆ ಎಸ್ ಆರ್ ಪಿ ಸಿಬ್ಬಂದಿಗೆ ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಪ್ರತಿ ತಿಂಗಳು 6 ಸಾವಿರ ಲಂಚ ನೀಡಲು ಡಿಮ್ಯಾಂಡ್ ಮಾಡಿದ್ದರು. ಅದರಂತೆ ಇಂದು ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇಂದು 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್, ಡಿವೈಎಸ್ ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!