March 17, 2026

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ

0
image_editor_output_image680176594-1720625065690

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಬಗ್ಗೆ ವರದಿಯಾಗಿದೆ.ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ  ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು, ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ಮೇಲೆ 8 ಕ್ರಿಮಿನಲ್ ಕೇಸ್ ಇದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯನ್ನು ಅಪಹರಣ ಮಾಡಿ ಮತಾಂತರ ಮಾಡಿರುವ ಬಗ್ಗೆ ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ಕೊಟ್ಟಿದ್ದಾರೆನ್ನಲಾಗಿದೆ.

ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!