May 6, 2026

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

0
image_editor_output_image1549735189-1720682175780.jpg

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಿಬೇಕು ಎಂದು ಕೋರಿ ಡಾ. ಪ್ರಭಾಕರ್‌ ಭಟ್‌ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್ಐಆರ್‌ ಹಾಗೂ ಸ್ಥಳೀಯ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರ ಪ್ರಭಾಕರ್‌ ಭಟ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಘಟನೆ ನಡೆದು ಎರಡು ದಿನಗಳ ಬಳಿಕ ವಿಳಂಬವಾಗಿ ದೂರು ದಾಖಲಿಸಲಾಗಿದೆ. ಇದೊಂದು ರಾಜಕೀಯ ದುರುದ್ದೇಶದಿಂದ ದಾಖಲಿಸಿಕೊಳ್ಳಲಾದ ಪ್ರಕರಣವಾಗಿದೆ.

ನ್ಯಾಯಾಲಯದ ಅನುಮತಿ ಪಡೆದುಕೊಳ್ಳದೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಅರ್ಜಿದಾರರು ಕಾನೂನು ಪಾಲಕ ನಾಗರಿಕರಾಗಿದ್ದು, ದೂರುದಾರರು ಆರೋಪಿಸಿದಂತಹ ತಪ್ಪು ಅವರು ಎಸಗಿಲ್ಲ. ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು. ಅದರಂತೆ ಮಧ್ಯಾಂತರ ತಡೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!