May 6, 2026

ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಸುಲಿಗೆ: ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತ್ ಬಂಧನ

0
image_editor_output_image108919497-1720690408306.jpg

ಬೆಂಗಳೂರು: ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಟ್ರೋಲ್‌ಗೊಳಗಾಗಿದ್ದ ನಿರೂಪಕಿ ದಿವ್ಯಾ ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸ್ಪಾ ಮಾಲೀಕನ ಸುಲಿಗೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು.

ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಮಾಡಿ ಅವರಿಂದ 15 ಲಕ್ಷ ರೂ. ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

– Advertisement –
ಈ ಪ್ರಕರಣದಲ್ಲಿ ಈಗಾಗಲೇ ಖಾಸಗಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕರಾಗಿದ್ದ ರಾಜಾನುಕುಂಟೆ ವೆಂಕಟೇಶ್, ದಿವ್ಯಾ ತಮ್ಮ ಸಂದೇಶ್ ರವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!