ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು.