May 5, 2026

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಕಾರ್ಯಾಲಯ ಉದ್ಘಾಟನೆ

0
image_editor_output_image1853348612-1720775178894.jpg

ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಕಚೇರಿಯ ಉದ್ಘಾಟನೆ ಇಂದು ನೆರವೇರಿತು.

ದ.ಕ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಈ ಕಾರ್ಯಾಲಯವನ್ನು ಭಾರತ ಮಾತೆಯ ಭಾವಚಿತ್ರದ ಎದುರು ದೀಪ ಬೆಳಗಿಸಿ ಆರೆಸ್ಸೆಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಡಿ. ಕಾಮತ್‌, ಡಾ. ಭರತ್‌ ಶೆಟ್ಟಿ, ರಾಜೇಶ್‌ ನಾಯಕ್‌ ಉಳಿಪಾಡಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಮೇಯರ್ ಸುಧೀರ್‌ ಶೆಟ್ಟಿ, ಉಪಮೇಯರ್‌ ಸುನಿತಾ, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾ. ಗಣೇಶ್‌ ಕಾರ್ಣಿಕ್‌, ಕೆ. ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಮುಖಂಡ ನಿತಿನ್‌ ಕುಮಾರ್‌, ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!