February 3, 2026

ಮುಲ್ಕಿ: ಚಪ್ಪಲಿ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಚಪ್ಪಳಿ ಅಂಗಡಿ ಮಾಲಕ

0
Rape_minor_1200x768_0_1200x768.jpeg

ಮುಲ್ಕಿ: ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯೊಂದರಲ್ಲಿ ಮಹಿಳಾ ಗ್ರಾಹಕಿ ಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಡಿಸೆಂಬರ್ 12,ಭಾನುವಾರ ಮಧ್ಯಾಹ್ನ ನಡೆದಿದೆ.

ಅಂಗಡಿ ಮಾಲಿಕ ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ, ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕಿಯ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ದಾಖಲಾಗಿದೆ.

ಈ ಬಗ್ಗೆ ಮಹಿಳಾ ಗ್ರಾಹಕಿ ನೀಡಿದ ದೂರಿನಂತೆ ಅಂಗಡಿ ಮಾಲಿಕನಾದ ಸಂಶುದ್ದಿನ್ ಎಂಬಾತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಂಗಡಿ ಮಾಲಕನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!