February 4, 2026

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಉರುಳಿ ಬಿದ್ದ ಬೃಹತ್ ಮರ

0
image_editor_output_image-1018854122-1720862495591.jpg

ಪುತ್ತೂರು: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ.

ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ನಲ್ಲಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲೇ ಇದ್ದ ಬೃಹತ್ ಗಾತ್ರದ ಮರ, ಭಾರಿ ಮಳೆಗೆ ರಸ್ತೆ ಮೇಲೆ ಬಿದ್ದಿದೆ.

ಇದರಿಂದಾಗಿ ಸುಮಾರು 4 ಗಂಟೆಗೂ ಮಿಕ್ಕಿ ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದೆ. ಸ್ಥಳಕ್ಕೆ ಆಗಮಿಸಿದ ಪೋಲೀಸ್, ಅಗ್ನಿಶಾಮಕದಳದಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!