ಬೈಕ್ ಕೊಡಿಸದ್ದಕ್ಕೆ ಯುವಕ ನೇಣು ಆತ್ಮಹತ್ಯೆ
ರಾಣಿಬೆನ್ನೂರ: ಬೈಕ್ ಕೊಡಿಸಿ ಎಂದು ಪಾಲಕರ ಜೊತೆಗೆ ಹಠ ಮಾಡಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ.
ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು. ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗುವಂತಾಗಿದೆ.





