ಕಡಬ: ಜೋರಾಗಿ ಬೀಸಿದ ಗಾಳಿಗೆ ಹಾರಿ ಹೋದ ಶಾಲೆಯ ಹೆಂಚುಗಳು
ಕಡಬ: ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ.
ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ.
ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ.
ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ





