December 16, 2025

ಉಡುಪಿ: ಮನೆಯಲ್ಲಿ ಅಗ್ನಿ ಅವಘಡ: ಪತಿ ಮೃತ್ಯು, ಪತ್ನಿ ಗಂಭೀರ

0
image_editor_output_image-453692734-1721033195244.jpg

ಉಡುಪಿ: ಬೆಳ್ಳಂಬೆಳಗ್ಗೆ ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಪತ್ನಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ರಾಮಾನಂದ ಶೆಟ್ಟಿ(52) ಎನ್ನಲಾಗಿದೆ. ಸೋಮವಾರ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಾಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!