September 8, 2024

ಕಾಸರಗೋಡು: ಶಾಲಾ ಪರಿಸರದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

0

ಕಾಸರಗೋಡು: ಶಾಲಾ ಪರಿಸರದಲ್ಲಿ ನವಜಾತ ಹೆಣ್ಣು ಶಿಶುವೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪಂಜಿಕಲ್ಲಿನಲ್ಲಿ ನಡೆದಿದೆ.

ಇಲ್ಲಿನ ಎಸ್‌.ವಿ.ಎ.ಯು.ಪಿ. ಶಾಲಾ ಪರಿಸರದಲ್ಲಿ ಒಂದು ದಿನ ಪ್ರಾಯದ ಹೆಣ್ಣು ಶಿಶುವೊಂದು ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇರೆಗೆ ಆದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶಿಶುವಿನ ರಕ್ಷಣೆ ಮಾಡಿದ್ದಾರೆ.

ಶಾಲಾ ಪರಿಸರದಲ್ಲಿದ್ದ ಶಿಶುವನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಬಳಿಕ ಕಾಸರಗೋಡಿನ ಸರಕಾರಿ ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಶಿಶು ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!