February 4, 2026

ಕುಮಾಟ-ಕಾರವಾರ ಹೆದ್ದಾರಿಗೆ ಗುಡ್ಡ ಕುಸಿತ: ಸಂಚಾರ ಸ್ಥಗಿತ, ಐವರು ಸಿಲುಕಿರುವ ಶಂಕೆ

0
image_editor_output_image-866486554-1721113129809.jpg

ಉ.ಕ: ಜಿಲ್ಲೆಯ ಕುಮಾಟ-ಕಾರವಾರ ಹೆದ್ದಾರಿಯ ಶಿರೋರ್ ಎಂಬಲ್ಲಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತಗೊಂಡಿದೆ. ಘಟನೆಯಲ್ಲಿ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ‌.

ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

5 ಮಂದಿ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದ್ದು, ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ

Leave a Reply

Your email address will not be published. Required fields are marked *

error: Content is protected !!