ಆಂಬ್ಯುಲೆನ್ಸ್‌ಗೆ ದಾರಿ ಕೊಡುವಾಗ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದರೆ ದಂಡವಿಲ್ಲ
ಬೆಂಗಳೂರು: ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ ಹಾಗೂ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್‌ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಆಂಬ್ಯುಲೆನ್ಸ್‌ಗೆ ದಾರಿ ಮಾಡುವಾಗ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಕ್ಯಾಮರಾಗಳ ದೃಶ್ಯ ಆಧರಿಸಿ ದಂಡ ವಿಧಿಸಿದ ಉದಾಹರಣೆಗಳಿವೆ. ಇದಕ್ಕೆ ಭಯಪಡಬೇಕಾಗಿಲ್ಲ.. ಕ್ಯಾಮರಾ ಹೊಂದಿರುವ ಪ್ರತಿ ಸಿಗ್ನಲ್‌ನಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಐದು ಸೆಕೆಂಡುಗಳ ಕಾಲ ಚಟುವಟಿಕೆಗಳು ರೆಕಾರ್ಡ್ ಆಗುತ್ತವೆ. ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವುದಕ್ಕಾಗಿ ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ತಕ್ಷಣವೇ ವಾಹನ ಸವಾರರ ಮೇಲಿನ ದಂಡ ರದ್ದುಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.





