December 18, 2025

ಉಪ್ಪಿನಂಗಡಿ: ಐರಾವತ ಬಸ್ಸಿನಲ್ಲಿ ಬೆಂಕಿ ಅವಘಡ

0
image_editor_output_image220231942-1721280156836

ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಐರಾವತ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.

ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಅಲ್ಲಿದ್ದ ಇಸಾಕ್, ಇಕ್ಬಾಲ್, ಜಾಯಿ, ಝಕಾರಿಯಾ, ಸಿದ್ದೀಕ್ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.

Leave a Reply

Your email address will not be published. Required fields are marked *

error: Content is protected !!