September 8, 2024

ಶಿರಾಡಿಘಾಟ್: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಕುಸಿದ ಗುಡ್ಡ, ವಾಹನ ಸಂಚಾರ ಸ್ಥಗಿತ

0

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!