March 17, 2026

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಕೆಲವು ತಗ್ಗು ಪ್ರದೇಶಗಳು ಜಲಾವೃತ

0
image_editor_output_image916522565-1721294382457.jpg

ಬಂಟ್ವಾಳ: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ‌. ಜಲಾವೃತಗೊಂಡ ಪಾಣೆಮಂಗಳೂರು ಆಲಡ್ಕ ಸಹಿತ ಅನೇಕ ಕಡೆಗಳಿಗೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ದನ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಲಡ್ಕದಲ್ಲಿ ನೆರೆ ನುಗ್ಗಿದ ಮನೆಗಳ ಸದಸ್ಯರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನು 5 ಮನೆಗಳಿಗೆ ನೀರು ನುಗ್ಗುವ ಬೀತಿ ಇರುವುದರಿಂದ ಅವರನ್ಬು ಕೂಡ ಸುರಕ್ಷಿತ ಸ್ಥಳ ಸ್ಥಳಾಂತರ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಪಾಣೆಮಂಗಳೂರು ಶಾರದ ಹೈಸ್ಕೂಲ್ ನಲ್ಲಿ ಗಂಜಿ ಕೇಂದ್ರವನ್ಬು ತೆರೆಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!