March 25, 2026

ವಿಟ್ಲ: ಭಾರೀ ಮಳೆಗಾಳಿಗೆ ಕುಸಿದು ಬಿದ್ದ ಕೋಳಿ ಶೆಡ್: 1500ಕ್ಕೂ ಅಧಿಕ ಕೋಳಿಗಳು ನೆಲಸಮ

0
image_editor_output_image481292646-1721377654024

ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

ಜು.18ರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು. ಕೋಳಿಗಳು ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಸುಮಾರು 700 ಕೋಳಿಗಳು ಮಾರಾಟವಾಗಿದ್ದವು.

ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!