ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೂವರು ಸಾವು, ಮೂವರು ಗಂಭೀರ
ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.
ಚೆನ್ನಮ್ಮ (30), ಅವಳಿ ಮಕ್ಕಳಾದ ಅನುಶ್ರೀ (1), ಅಮೂಲ್ಯ (1) ಮೃತ ದುರ್ದೈವಿಗಳು. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದು ನಸುಕಿನ ಜಾವ ಸುಮಾರು 3:30ಕ್ಕೆ ಮನೆಯ ಮೇಲ್ಚಾವಣಿ ಕುಸಿದು ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ದರು.
ಈ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.





