February 2, 2026

ಮದ್ಯಪಾರ್ಟಿ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ಮೂವರು ಯುವಕರು ಸಾವು

0
image_editor_output_image-1958960481-1721379472540.jpg

ಕೊಪ್ಪಳ: ಮದ್ಯಪಾರ್ಟಿ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ರೈಲೊಂದು ಹರಿದ ಪರಿಣಾಮ ಯುವಕರು ಸಾವನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.

ಮೃತರನ್ನು ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ ಭೀಮನಾಯ್ಕ (20) ಮೃತ ಯುವಕರು. ಕುಡಿತ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!