March 19, 2026

ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ Reels ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

0
image_editor_output_image2072480354-1721379924242.jpg

ಬೆಂಗಳೂರು: ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ ಇದರ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಮುಂದಾಗಿದೆ.

ಸದ್ಯ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಪಾಲಿಕೆ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ.

ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ.

ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!