ಬೆಳ್ತಂಗಡಿ: ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಬಂದ್
ಬೆಳ್ತಂಗಡಿ: ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ದೊಡ್ಡ ಪ್ರಮಾಣದಲ್ಲಿ ಭೂ ಕುಸಿತವಾಗಿದ್ದು ಇಲ್ಲಿ ಇನ್ನಷ್ಟು ಕುಸಿತಗಳಾಗುವ ಅಪಾಯವಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು
ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಸಂಪೂರ್ಣವಾಗಿ ಮಣ್ಣು ತೆರವು ಕಾರ್ಯ ನಡೆಯುವರೆಗೆ ಬದಲಿ ರಸ್ತೆಗಳ ಮೂಲಕ ಸಂಚರಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.




