December 3, 2024

ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲು

0

ಮುಂಬೈ: ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಎಫ್‌ಐಆರ್‌ ದಾಖಲಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ತಮ್ಮ ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್‌ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೇ ತಮ್ಮ ಖಾಸಗಿ ಆಡಿ ಕಾರಿಗೆ ರೆಡ್‌ಲೈಟ್‌ ಮತ್ತು ಮಹಾರಾಷ್ಟ್ರ ಸರ್ಕಾರದ ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು.

ವಿಚಾರಣೆಗಾಗಿ ಮಸ್ಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರೀ ನ್ಯಾಷನಲ್‌ ಅಕಾಡೆಮಿ ಆಫ್‌ ಅಡ್ಮಿನಿಸ್ಟ್ರೇಷನ್‌ಗೆ ಬರುವಂತೆ ಸೂಚಿಸಿತ್ತು. ವಿಚಾರಣೆ ಬಳಿಕ ಗುರುವಾರ (ಜು.18) ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದ ಯುಪಿಎಸ್‌ಸಿ, ಶುಕ್ರವಾರ (ಇಂದು) ಎಫ್‌ಐಆರ್‌ ದಾಖಲಿಸಿದೆ.

Leave a Reply

Your email address will not be published. Required fields are marked *

error: Content is protected !!