May 5, 2026

ನೇಜಾರು ಹತ್ಯಾಕಾಂಡ ಪ್ರಕರಣ: ಸಾಕ್ಷಿ ವಿಚಾರಣೆ ಆಗಸ್ಟ್ 24ಕ್ಕೆ ಮುಂದೂಡಿದ ನ್ಯಾಯಾಲಯ

0
image_editor_output_image1961683861-1721457068018.jpg

ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಆದೇಶ ನೀಡಿದೆ.

ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್‌ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು.

Leave a Reply

Your email address will not be published. Required fields are marked *

error: Content is protected !!