ಅದ್ಯಪಾಡಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತ
ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.
ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.





