19 ವರ್ಷದ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ರಾಮನಗರ: 19 ವರ್ಷದ ಯುವತಿ ಮೇಲೆ ವ್ಯಕ್ತಿ ಓರ್ವನಿಂದ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಬಿಡದಿ ಹೋಬಳಿಯ ಗ್ರಾಮದಲ್ಲಿ 20 ದಿನಗಳ ಹಿಂದೆ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪಕ್ಕದ ಮನೆಯ ಚಂದ್ರು ಎನ್ನುವವರ ಮನೆಯಲ್ಲಿ ಘಟನೆ ನಡೆದಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಗೋಪಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





