ಸಂಬಂಧಿಕರೇ ಸೇರಿಕೊಂಡು ಮಹಿಳೆ ಬರ್ಬರ ಕೊಲೆ ಹತ್ಯೆ
ಮೈಸೂರು: ಸಂಬಂಧಿಕರೇ ಸೇರಿಕೊಂಡು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌಥಿ ಗ್ರಾಮದಲ್ಲಿನಡೆದಿದೆ.
ಭಾಗ್ಯವತಿ(32) ಮೃತ ಮಹಿಳೆ. ಚೌಥಿ ಗ್ರಾಮದ ಬಸವರಾಜು ಹಾಗೂ ಯಶೋಧಮ್ಮ ದಂಪತಿ ಪುತ್ರಿಯಾದ ಇವರಿಗೆ ಸಂಪತ್ ಕುಮಾರ್ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು.
ಇಬ್ಬರು ಗಂಡು ಮಕ್ಕಳು ಕೂಡ ಇದ್ದರು. ಎಲ್ಲವೂ ಚೆನ್ನಾಗಿತ್ತು. ಆದ್ರೆ, 5 ವರ್ಷದ ಹಿಂದೆ ಪತಿ ಸಂಪತ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪತಿ ಕಳೆದುಕೊಂಡ ಭಾಗ್ಯವತಿ ಧೃತಿಗೆಡದೆ ಜೀವನ ಕಟ್ಟಿಕೊಂಡಿದ್ದರು.




