February 2, 2026

ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್‌ ಕಾನ್ ಸ್ಟೇಬಲ್‌ ಆತ್ಮಹತ್ಯೆ

0
image_editor_output_image1757642323-1721594933809.jpg

ಗುಬ್ಬಿ: ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.

ಶಿವಪ್ರಕಾಶ್ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!