ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಮರ
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು ಅದೃಷ್ಟವಶಾತ್ ಒಂದೇ ಒಂದು ಸೆಕೆಂಡ್, ಒಂದೇ ಒಂದು ಅಡಿ ದೂರ ಬಿದ್ದ ಕಾರಣ ಇಬ್ಬರ ಪ್ರಾಣ ಉಳಿದಿದೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ದೇವದಾನ ಎಸ್ಟೇಟ್ ಬಳಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಬೃಹತ್ ಮರ ಬಿದ್ದಿದೆ. ಪವಾಡ ಸದೃಶ ರೀತಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಅರೆ ಕ್ಷಣದ ಮಹತ್ವವನ್ನ ಸಾರಿ ಹೇಳುವಂತಿದೆ. ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಾರಿನ ಮುಂಭಾಗ ಜಖಂ ಆಗಿದ್ದು, ವಿದ್ಯುತ್ ತಂತಿಗಳ ಮೇಲೆಯೇ ಉದ್ದನೆಯ ಮರ ಬಿದ್ದಿದೆ.




