ಬೆಳ್ತಂಗಡಿ: ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ
ಬೆಳ್ತಂಗಡಿ : ಮನೆಯಿಂದ ಅಂಗಡಿಗೆ ತೆರಳಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವ ನದಿಯಲ್ಲಿ ಪತ್ತೆಯಾದ ಘಟನೆ ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ನಡೆದಿದೆ.
ಮೃತರನ್ನು ಬೆದ್ರಬೆಟ್ಟು ನಿವಾಸಿ ಬಾಬು ಮಡಿವಾಳ ಎಂಬುವರ ಪತ್ನಿ ಮೋಹಿನಿ (60) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಕೂಲಿ ಕೆಲಸ ಮುಗಿಸಿ ಅಂಗಡಿಗೆ ಹೋದವರು ಮನೆಗೆ ಹಿಂತಿರುಗಿರಲಿಲ್ಲ.
ಬಳಿಕ ಮನೆಯವರು ಹುಡುಕಾಡಿದ್ದು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಬಂಗಾಡಿ ಸಹಸ್ರ ನಾಗಬನ ದೇವಸ್ಥಾನ ಬಳಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.




