ಕಡಬ: ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಮೂವರ ಬಂಧನ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜ ಅರಣ್ಯ ವಲಯ ವ್ಯಾಪ್ತಿಯ ಬಲ್ಯದಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು , ಓರ್ವ ಪರಾರಿಯಾಗಿದ್ದಾನೆ.
ಬಂಧಿತರಿಂದ ನಾಡ ಕೋವಿ ಸಹಿತ ಬೇಟೆಯಾಡಿದ ಕಾಡು ಪ್ರಾಣಿಬರ್ಕಾ ವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯ್, ಹೇಮಂತ್, ಸಜಿ ಬಂಧಿತರಾಗಿದ್ದು ಪ್ರವೀಣ್ ಎಂಬಾತ ತಪ್ಪಿಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.




