February 1, 2026

ಮಂಗಳೂರು: ಮನೆಯಿಂದ ಚಿನ್ನಾಭರಣ ಕಳವು ಪ್ರಕರಣ: ಲಕ್ಷಾಂತರ ಮೌಲ್ಯದ ಸೊತ್ತುಗಳ ಸಹಿತ ಆರೋಪಿಯ ಬಂಧನ

0
image_editor_output_image2057002030-1721716266832.jpg

ಮಂಗಳೂರು: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ಗ್ರಾಮದ ನೀರಲ್ಕೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಜುಲೈ 3 ರಂದು ರಾತ್ರಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ಗ್ರಾಮದ ನೀರಲ್ಕೆಎಂಬಲ್ಲಿರುವ ಶ್ರೀಮತಿ ಸಾಗೀರ ಎಂಬವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮೀಟಿ ಮನೆಯ ಕಪಾಟಿನ ಒಳಗಿದ್ದಚಿನ್ನಾಭರಣಗಳನ್ನು ಕಳವು ಮಾಡಿದ ಬಗ್ಗೆ ಮುಲ್ಕಿ ಠಾಣೆಗೆ ಸಾಗೀರ ಎಂಬವರು ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದ ಆರೋಪಿ ಚಿಕ್ಕಮಗಳೂರು ನಿವಾಸಿ ಅಬೂಬಕ್ಕರ್ @ ಇತ್ತೆ ಬರ್ಪೆ ಅಬೂಬಕ್ಕರ್,(69) ಎಂಬಾತನನ್ನು ಮುಲ್ಕಿ ಠಾಣಾ ಪಿ.ಎಸ್.ಐ. ವಿನಾಯಕ ಬಾವಿಕಟ್ಟಿ ಮತ್ತು ಸಿಬ್ಬಂದಿಗಳು ಜುಲೈ 20 ರಂದು ದಸ್ತಗಿರಿ ಮಾಡಿದ್ದು ಆರೋಪಿಯಿಂದ ಪ್ರಕರಣದ ಕಳವಿಗೆ ಸಂಬಂಧಿಸಿದ ಒಟ್ಟು 19 ಗ್ರಾಂ ಚಿನ್ನಾಭರಣಗಳನ್ನು ಮತ್ತು ಕಳವು ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ಮತ್ತು ಇತರ ಸಾಧನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,89,400/- ರೂ ಆಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!