ಪುತ್ತೂರು: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಮೃತ್ಯು
ಪುತ್ತೂರು: ನೆಹರುನಗರ ಮಂಜಲಪಡ್ಪು ಬಳಿಯ ಪೆಟ್ರೋಲ್ ಪಂಪ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅರ್ದ ಗಂಟೆ ಕಳೆದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆ ಬಳಿಕವೇ ಮೃತದೇಹ ಬದಿಗೆ ಸರಿಸಲಾಯಿತು. ಅಷ್ಟರವರೆಗೂ ಮೃತದೇಹ ಅಪಘಾತ ನಡೆದ ಸ್ಥಳದಲ್ಲೇ ಇತ್ತು. ವಾಹನ ಸಂಚಾರಕ್ಕೆ ತೊಡಕಾಗಿತ್ತು.
ಪುತ್ತೂರಿನ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕೇಸು ದಾಖಲಿಸಿದ್ದಾರೆ.





