ಬಂಟ್ವಾಳ: ವಿವಾಹಿತ ಯುವಕನಿಂದ ಯುವತಿ ಗರ್ಭವತಿ: ಯುವಕನ ವಿರುದ್ಧ ಪೊಲೀಸ್ ದೂರು
ಬಂಟ್ವಾಳ: ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರುನೀಡಲಾಗಿದೆ.
ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ವೆಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ ನ್ಯಾಯ ಒದಗಿಸಿಕೊಡುವಂತೆ ಮನವಿಮಾಡಿದ್ದಾರೆ.






