December 19, 2025

ಮೂಡಿಗೆರೆ: KSRTC ಬಸ್, ಟ್ಯಾಂಕರ್ ಮಧ್ಯೆ ಅಪಘಾತ: ಹಲವರಿಗೆ ಗಂಭೀರ ಗಾಯ

0
image_editor_output_image-1048688316-1721802213861.jpg

ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

KSRTC, ಟ್ಯಾಂಕರ್ ಅಪಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!