ಜಮೀನು ವಿವಾದ: ಪರಸ್ಪರ ಹೊಡೆದುಕೊಂಡು ಸಹೋದರರಿಬ್ಬರು ಸಾವು
ಚಿಕ್ಕೋಡಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರು ಪರಸ್ಪರ ಹೊಡೆದುಕೊಂಡು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಮಂತ ರಾಮಚಂದ್ರ ಖೋತ (35) ಹಾಗೂ ಖಂಡೋಭಾ ತಾನಾಜಿ ಖೋತ (30) ಎಂದು ಗುರುತಿಸಲಾಗಿದೆ. ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳ ನಡುವೆ ಸೋಮವಾರ ರಾತ್ರಿ ಗಲಾಟೆ ನಡೆದಿತ್ತು.
ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರು. ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.





