March 25, 2026

ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ

0
image_editor_output_image-1933835893-1721807895020.jpg

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ.

ಕೃತಿ ಕುಮಾರಿ (24) ಮೃತ ಯುವತಿ. ಈಕೆ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು.

ರಾತ್ರಿ 11:30ರ ವೇಳೆಗೆ ಘಟನೆ ನಡೆದಿದೆ. ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ. ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Leave a Reply

Your email address will not be published. Required fields are marked *

error: Content is protected !!