March 17, 2026

ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕನ ಮೃತದೇಹ ಪತ್ತೆ!

0
image_editor_output_image1416379026-1721823869662

ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಮೃತದೇಹ ಎಂದು ತಿಳಿದುಬಂದಿದೆ.

ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ.

ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣನ್​ ನಾಪತ್ತೆ ಆಗಿದ್ದಾರೆ ಎಂದು ಅವರ ಮಾವ ಸೆಂದೀಲ್ ಎಂಬುವವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ನಾಲ್ಕು ದಿನದ ಹಿಂದೆ ಸಿಕ್ಕಿದ್ದ ಅರ್ಧ ದೇಹ, ಶರವಣನ್​​ ಅವರದ್ದಾಗಿದೆ ಎಂದು ಎಸ್ಪಿ ಖಚಿತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!