ವಿಟ್ಲ: ಬಸ್ ನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ: ಗಂಭೀರ
ವಿಟ್ಲ: ಬಸ್ಸಿನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ಸೂರಿಕುಮೇರಿನಲ್ಲಿರುವ ತನ್ನ ಮಗಳ ಮನೆಗೆ ತೆರಳಿದ್ದ ಪುತ್ತೂರಿನ ಹಿರಿಯ ಟೈಲರ್ ಆರ್ಯಾಫು ಗ್ರಾಮದ ಕುಂಜೂರು ನಿವಾಸಿ ಮಹಮ್ಮದ್ ಕುಂಞಿ ರವರು ಸೂರಿಕುಮೇರಿನಲ್ಲಿ ಬಸ್ ನಿಂದ ಇಳಿದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.





