ಮಂಗಳೂರು: ವಾಹನಗಳಲ್ಲಿ ಕಣ್ಣು ಕುಕ್ಕುವ ಲೈಟ್ ಬಳಕೆ: 1,170 ಪ್ರಕರಣ ದಾಖಲು
ಮಂಗಳೂರು: ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಜೂನ್ 15ರಿಂದ ಇದುವರೆಗೆ ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5.86 ಲಕ್ಷ ದಂಡ ವಿಧಿಸಿದ್ದಾರೆ.
‘ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಬೀದಿ ದೀಪಗಳನ್ನು ಹೊಂದಿರುವ ಎಲ್ಲಾ ರಸ್ತೆಗಳಲ್ಲಿ ಹೆಚ್ಚು ಪ್ರಖರ ಬೆಳಕಿನ ದೀಪ ಬಳಸಿದ ವಾಹನ ಚಾಲಕರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿದ್ದೇವೆ.
ನಿಯಮ ಉಲ್ಲಂಘಿಸಿದ ವಾಹನ ಚಾಲಕರ ವಿರುದ್ದ ಕ್ರಮ ಕೈಗೊಂಡಿದ್ದೇವೆ. ಈ ವಿಶೇಷ ಕಾರ್ಯಾಚರಣೆಯು ಇನ್ನೂ ಮುಂದುವರೆಯಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.




